Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:37 - ಕನ್ನಡ ಸತ್ಯವೇದವು C.L. Bible (BSI)

37 ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಬರುವಾತನು ಇನ್ನು ಸ್ಪಲ್ಪಕಾಲದಲ್ಲಿ ಬರುವನು, ತಡಮಾಡುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ. ಆತನು ತಡಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಕಶ್ಯಾಕ್ ಮಟ್ಲ್ಯಾರ್, ಉಲ್ಲೊಸೊಚ್ ಯೆಳ್ ಹುರ್‍ಲಾ, ಯೆತಾ ಮನುನ್ ಸಾಂಗಲೊ ತೊ ಯೆತಾ ತಡೊ ಕರಿನಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:37
11 ತಿಳಿವುಗಳ ಹೋಲಿಕೆ  

ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.


ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.


ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?" ಎಂದು ಯೇಸುವನ್ನು ಕೇಳಿದರು.


ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.


ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು