Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:4 - ಕನ್ನಡ ಸತ್ಯವೇದವು C.L. Bible (BSI)

4 ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೋರಿಗಳ ಮತ್ತು ಹೋತಗಳ ರಕ್ತದಿಂದ ಪಾಪಗಳು ಪರಿಹಾರವಾಗುವದು ಅಸಾಧ್ಯವಾಗಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬೈಲಾಂಚ್ಯಾ, ಅನಿ ಪಾಲ್ವ್ಯಾಂಚ್ಯಾ ರಗ್ತಾನ್ ಪಾಪಾತ್ನಾ ಸುಟ್ಕಾ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:4
19 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.


ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.


ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೊಳ್ಳುವೆನಾಗ ಒಡಂಬಡಿಕೆಯನು.”


ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪಪರಿಹಾರಕಬಲಿಗಳು ನಿಮಗೆ ಬೇಡವಾದವು; ಇವು ಯಾವುವು ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ.


ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.


ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.


ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.


ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು