Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 10:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವಾಂಗ ಹೋಮಗಳೂ ಪಾಪಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸರ್ವಾಂಗಹೋಮಗಳಲ್ಲಿಯೂ ದೋಷಪರಿಹಾರಕಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದಹನಬಲಿಗಳಲ್ಲಿಯೂ ಪಾಪಪರಿಹಾರ ಬಲಿಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಜನಾವರಾಂಚೆ ಸಗ್ಳೆ ಆಂಗ್ ಜಾಳ್ವುತಲೆ ನಾ ಹೊಲ್ಯಾರ್ ಪಾಪಾಚ್ಯಾ ಸುಟ್ಕೆಸಾಟ್ನಿ ಭೆಟ್ವಲ್ಲಿ ಬಲಿ ತುಜ್ಯಾ ಮನಾಕ್ ಯೆಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 10:6
9 ತಿಳಿವುಗಳ ಹೋಲಿಕೆ  

ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II


ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು