Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:13 - ಕನ್ನಡ ಸತ್ಯವೇದವು C.L. Bible (BSI)

13 ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದಲಿಲ್ಲ. ಆದರೂ ಅವುಗಳನ್ನು ದೂರದಿಂದ ನೋಡಿ ಮತ್ತು ಉಲ್ಲಾಸದೊಡನೆ ಸ್ವೀಕರಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿಗಳು ಆಗಿದ್ದೆವೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವರೆಲ್ಲರು ವಾಗ್ದಾನದ ಫಲಗಳನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ಉಲ್ಲಾಸದೊಡನೆ ವಂದಿಸಿ ನಂಬಿಕೆಯುಳ್ಳವರಾಗಿ ಮೃತರಾದರು. ತಾವು ಭೂವಿುಯ ಮೇಲೆ ಪರದೇಶದವರೂ ಪ್ರವಾಸಿಗಳೂ ಆಗಿದ್ದೇವೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾನ್ ತ್ಯಾ ಲೊಕಾಕ್ನಿ ಗೊಸ್ಟ್ ದಿಲ್ಲೆ ಸಗ್ಳೆ ತೆನಿ ಘೆವ್ಕ್ ನಾತ್ ಲೈ ಎಳಾಚ್ಯಾ ಮಾನಾ ಯೆತಲೆ ಹೊತ್ತ್ಯೆ ಸಗ್ಳೆ ಬಗುನ್ ಸ್ವಾಗತ್ ಕರುನ್ ಖುಶಿ ಹೊಲ್ಯಾನಿ, ಅನಿ ತೆನಿ ಜಗಾರ್ ಪರ್ವಾಸಾಕ್ ಯೆಲ್ಲೆ ಅನಿ ಒಳಕ್ ನಸಲ್ಯಾಂಚ್ಯಾ ಸಾರ್ಕೆ ಹೊವ್ನ್ ಹಾತ್ ಮನ್ತಲೆ ಒಳ್ಕುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:13
36 ತಿಳಿವುಗಳ ಹೋಲಿಕೆ  

ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.


ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II


“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.


ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.


ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.


ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?


ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.


ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ


ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.


ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ.


ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.


ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.


ಧರೆಯೊಳು ಪ್ರವಾಸಿಯಾಗಿ ನಾನಿರುವೆನಯ್ಯಾ I ನಿನ್ನಾಜ್ಞೆಗಳನು ನನಗೆ ಮರೆಮಾಡಬೇಡಯ್ಯಾ II


ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.


ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.


“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.


ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.


ಈ ಕಾರಣದಿಂದಲೇ ನಾವು ಸದಾ ಸ್ಥಿರಚಿತ್ತರಾಗಿದ್ದೇವೆ. ಈ ದೇಹವನ್ನೇ ನೆಚ್ಚಿ ಇದರಲ್ಲೇ ನೆಲೆಯಾಗಿರುವವರೆಗೂ ನಾವು ಪ್ರಭುವಿನಿಂದ ದೂರವಿರುವ ಪ್ರವಾಸಿಗಳಂತೆ ಇದ್ದೇವೆ.


ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ :


ಅಬ್ರಹಾಮನು ಫಿಲಿಷ್ಟಿಯರ ಆ ಪ್ರಾಂತ್ಯದಲ್ಲಿ ಬಹುಕಾಲ ಪ್ರವಾಸಿಯಾಗಿದ್ದನು.


ಅದಕ್ಕೆ ಅವನು, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ,” ಎಂದು ಉತ್ತರಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು