Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:25 - ಕನ್ನಡ ಸತ್ಯವೇದವು C.L. Bible (BSI)

25 ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸ್ವಲ್ಪ ಕಾಲದಲ್ಲಿ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟವನ್ನು ಅನುಭವಿಸುವುದೇ ಮೇಲೆಂದು ತೀರ್ಮಾನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವನು ಪಾಪಗಳಿಂದ ಸಿಗುವ ಸುಖವನ್ನು ಆರಿಸಿಕೊಳ್ಳಲಿಲ್ಲ. ಆ ಸುಖಗಳು ಬೇಗನೆ ಕೊನೆಗೊಳ್ಳುತ್ತವೆ. ಆದ್ದರಿಂದ ಅವನು ದೇವಜನರೊಂದಿಗೆ ಕಷ್ಟಪಡುವುದನ್ನೇ ಆರಿಸಿಕೊಂಡನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಉಲ್ಲೆ ಯೆಳ್ ಪಾಪಾಚ್ಯಾ ಜಗಾತ್ ಸಾವ್ಕಾರ್ಕಿಚೆ ಜಿವನ್ ಕರ್‍ತಲ್ಯಾಚ್ಯಾನ್ಬಿ ದೆವಾಚ್ಯಾ ಲೊಕಾಂಚ್ಯಾ ವಾಂಗ್ಡಾ ತರಾಸ್ ಸೊಸುನ್ ಘೆತಲೆ ಬರೆ ಮನುನ್ ಚಿಂತ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:25
34 ತಿಳಿವುಗಳ ಹೋಲಿಕೆ  

ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು.


ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;


ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!


ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?


ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II


ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು.


ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು