32 ಇನ್ನೂ ಏನು ಹೇಳಬೇಕು? ಗಿಡಿಯೋನ್ ಬಾರಾಕ್ ಸಂಸೋನ್ ಎಫ್‍ಥ ದಾವೀದ್ ಸಮುವೇಲ್ ಎಂಬವರ ವೃತ್ತಾಂತವನ್ನೂ ಪ್ರವಾದಿಗಳ ವೃತ್ತಾಂತವನ್ನೂ ವಿವರವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
32 ನಾನು ನಿಮಗೆ ಮತ್ತಷ್ಟು ದೃಷ್ಟಾಂತಗಳನ್ನು ಹೇಳುವ ಅಗತ್ಯವಿದೆಯೋ? ನಾನು ಗಿದ್ಯೋನನ, ಬಾರಾಕನ, ಸಂಸೋನನ, ಯೆಫ್ತಾಹನ, ದಾವೀದನ, ಸಮುವೇಲನ ಮತ್ತು ಪ್ರವಾದಿಗಳ ಕುರಿತು ನಿಮಗೆ ಹೇಳುವಷ್ಟು ಸಮಯ ನನಗಿಲ್ಲ.
ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.
ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.
ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)
ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!
ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!
ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.
ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.