ಇಬ್ರಿಯರಿಗೆ 11:35 - ಕನ್ನಡ ಸತ್ಯವೇದವು C.L. Bible (BSI)35 ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಪುನರುತ್ಥಾನದಿಂದ ತಿರಿಗಿ ಹೊಂದಿದರು. ಕೆಲವರು ತಾವು ಯಾತನೆಯ ಯಂತ್ರಕ್ಕೆ ಕಟ್ಟಲ್ಪಟ್ಟಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವದಕ್ಕೋಸ್ಕರ ಬಿಡುಗಡೆ ಬೇಡವೆಂದು ಹೇಳಿ ಮುರಿಸಿಕೊಂಡು ಸತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಬಾಯ್ಕೊ ಮಾನ್ಸಾನಿ ಮರುನ್ ಗೆಲ್ಲ್ಯಾ ಅದ್ಲ್ಯಾ ಲೊಕಾಕ್ನಿ ಪರ್ತುನ್ ಝಿತ್ತೆ ಹೊತಲ್ಯಾ ವೈನಾ ಪರ್ತುನ್ ಘೆಟ್ಲ್ಯಾನಿ, ಥೊಡ್ಯಾ ಲೊಕಾನಿ ಬರೆ ಪರ್ತುನ್ ಝಿತ್ತೆ ಹೊತಲೆ ಗಾವ್ತಾ ಮನುನ್ ಸುಟ್ಕಾ ನಕ್ಕೊ ಮನುನ್ ಮೊಡ್ವುನ್ ಘೆವ್ನ್ ಮರ್‍ಲ್ಯಾನಿ. ಅಧ್ಯಾಯವನ್ನು ನೋಡಿ |