Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:38 - ಕನ್ನಡ ಸತ್ಯವೇದವು C.L. Bible (BSI)

38 ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಅಸ್ಲ್ಯಾಕ್ನಿ ಹ್ಯಾ ಜಗಾತ್‍ ಥವ್ನ್ ಘೆಯ್ನಸಿತ್ ತೆನಿ ತೆಂಚ್ಯಾ ದೆಶಾಚ್ಯಾ ಹಾಳ್ ಡಂಗ್ಳಿತ್, ಮಡ್ಡಿಯಾ ವೈನಿ, ಢೊಂಬಾತ್ನಿ ಅನಿ ಖಡ್ಡ್ಯಾತ್ನಿ ಫಿರುನ್ಗೆತ್ ರಾಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:38
16 ತಿಳಿವುಗಳ ಹೋಲಿಕೆ  

(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)


ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.


ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.


ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?


ಜೀಫ್ಯರಲ್ಲಿ ಕೆಲವರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ಮರುಭೂಮಿಯ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ; ಇದು ನಿಮಗೆ ಗೊತ್ತೇ?’ ಎಂದರು.


ಆದ್ದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಟ್ಟಾದ ಸ್ಥಳಗಳನ್ನು ಗೊತ್ತುಮಾಡಿಕೊಂಡು ಖಚಿತವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ನಾಡಿನಲ್ಲಿ ಇರುವುದಾದರೆ ಯೆಹೂದ ಪ್ರಜೆಗಳ ಮಧ್ಯದಲ್ಲೆಲ್ಲಾ ಹುಡುಕಿ ಅವನನ್ನು ಹಿಡಿಯುವೆನು,” ಎಂದನು.


ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ಒಡೆಯಾ, ಆಲಿಸಬೇಕು; ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಮರುಭೂಮಿಯ ದಕ್ಷಿಣದಲ್ಲಿ ಇರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.


ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಮರುಭೂಮಿಯ ಹೋರೆಷದಲ್ಲಿ ಅಡಗಿಕೊಂಡಿದ್ದನು.


ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು