Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:39 - ಕನ್ನಡ ಸತ್ಯವೇದವು C.L. Bible (BSI)

39 ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇವರೆಲ್ಲರೂ ನಂಬಿಕೆಯ ಮೂಲಕ ಒಳ್ಳೇ ಹೆಸರನ್ನು ಸಂಪಾದಿಸಿಕೊಂಡಿದ್ದರೂ ವಾಗ್ದಾನದ ಫಲವನ್ನು ಹೊಂದಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಇವರೆಲ್ಲರೂ ತಮ್ಮ ನಂಬಿಕೆಯ ವಿಷಯದಲ್ಲಿ ಪ್ರಸಿದ್ಧರಾಗಿದ್ದರು. ಆದರೆ ದೇವರ ದೊಡ್ಡ ವಾಗ್ದಾನವನ್ನು ಇವರಲ್ಲಿ ಯಾರೂ ಹೊಂದಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಹೆನಿ ಸಗ್ಳ್ಯಾನಿ ಅಪ್ಲ್ಯಾ ವಿಶ್ವಾಸಾನುಚ್ ಫಿಡೆ ಯೆಲ್ಲೆ ಹೊತ್ತ್ಯೆ ಖರೆ ದೆವಾಚಿ ಗೊಸ್ಟಿಯಾ ಹೆನಿ ಕೊನ್ಬಿ ಘೆವ್ಕನಾತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:39
6 ತಿಳಿವುಗಳ ಹೋಲಿಕೆ  

ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ;


ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು