Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:40 - ಕನ್ನಡ ಸತ್ಯವೇದವು C.L. Bible (BSI)

40 ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ, ನಾವಿಲ್ಲದೆ ಅವರು ಪರಿಪೂರ್ಣರಾಗಬಾರದೆಂದು ಸಂಕಲ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ದೇವರು ನಮಗೋಸ್ಕರ ಶ್ರೇಷ್ಠವಾದ ಭಾಗ್ಯವನ್ನು ಏರ್ಪಡಿಸಿ ನಾವಿಲ್ಲದೆ ಅವರು ಸಿದ್ಧಿಗೆ ಬರಬಾರದೆಂದು ಸಂಕಲ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ದೇವರು ನಮಗೆ ಶ್ರೇಷ್ಠವಾದದ್ದನ್ನು ಕೊಡಲು ಯೋಜನೆ ಮಾಡಿದನು. ನಮ್ಮೊಡನೆ ಮಾತ್ರ ಅವರು ಪರಿಪೂರ್ಣರಾಗಬೇಕೆಂಬುದೇ ಆ ಯೋಜನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಮ್ಕಾ ಎಗ್ದಮ್ ಬರೆ ದಿವ್ಚೆ ಮನುನ್ ಚಿಂತಲ್ಲ್ಯಾನ್, ತೆನಿ ಅಮ್ಚ್ಯಾ ವಾಂಗ್ಡಾ ಬರೆ ರ್‍ಹಾವ್ಚೆ ಮನ್ತಲೆ ದೆವಾಚಿ ಯೆವ್ಜನ್ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:40
11 ತಿಳಿವುಗಳ ಹೋಲಿಕೆ  

ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.


ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.


ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.


ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು