Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:5 - ಕನ್ನಡ ಸತ್ಯವೇದವು C.L. Bible (BSI)

5 ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಂಬಿಕೆಯಿಂದಲೇ ಹನೋಕನು ಮರಣವನ್ನು ಅನುಭವಿಸದೇ ಒಯ್ಯಲ್ಪಟ್ಟನು. ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಯಾರಿಗೂ ಕಾಣಿಸಿಗಲಿಲ್ಲ. ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹನೋಕನು ಮರಣವನ್ನು ಅನುಭವಿಸದೆ ಒಯ್ಯಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರಿಗೆ ಮೆಚ್ಚಿಕೆಯಾದವನಾಗಿದ್ದನೆಂದು ಸಾಕ್ಷಿ ಉಂಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹನೋಕನು ಸಾವನ್ನು ಅನುಭವಿಸದೆ ಈ ಲೋಕದಿಂದ ಮೇಲೋಕಕ್ಕೆ ಒಯ್ಯಲ್ಪಟ್ಟನು. ಪವಿತ್ರ ಗ್ರಂಥವು ಹೇಳುವಂತೆ, ಅವನು ಒಯ್ಯಲ್ಪಡುವುದಕ್ಕಿಂತ ಮೊದಲು ದೇವರಿಗೆ ನಿಜವಾಗಿಯೂ ಮೆಚ್ಚಿಕೆಯಾಗಿದ್ದನು. ತರುವಾಯ ಜನರಿಗೆ ಅವನು ಸಿಕ್ಕಲೇ ಇಲ್ಲ. ಅವನ ನಂಬಿಕೆಯ ದೆಸೆಯಿಂದ ದೇವರು ಅವನನ್ನು ತನ್ನೊಡನಿರಲು ಕೊಂಡೊಯ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಂಬಿಕೆಯಿಂದಲೇ ಹನೋಕನು ಮರಣ ಹೊಂದದೆ, ಒಯ್ಯಲಾದನು. “ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.” ಅವನು ಒಯ್ಯಲಾಗುವುದಕ್ಕಿಂತ ಮುಂಚೆ ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ವಿಶ್ವಾಸಾನುಚ್ ಹನೊಕಾಕ್ ಮರಾನ್ ನಸ್ತಾನಾ ದೆವಾನ್ ವೈರ್ ಉಕ್ಲುನ್ ನ್ಹೆಲ್ಯಾನ್, ತೆಕಾ ದೆವಾನ್ ಘೆವ್ನ್ ಗೆಲ್ಲ್ಯಾಸಾಟ್ನಿ ತೊ ಕೊನಾಕ್ಬಿ ಗಾವ್ಕ್ ನಾ; ತೊ ದೆವಾಕ್ನಾ ನ್ಹೆವ್ನ್ ಹೊವ್ಚ್ಯಾ ಪೈಲೆ ದೆವಾಕ್ ಮೆಚ್ಕಿಚೊ ಮಾನುಸ್ ಹೊವ್ನ್ ಹೊತ್ತೊ ಮನ್ತಲೆ ಪವಿತ್ರ್ ಪುಸ್ತಕಾತ್ ಸಾಂಗಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:5
17 ತಿಳಿವುಗಳ ಹೋಲಿಕೆ  

ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.


ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.


ಮೆತೂಷಲ ಹನೋಕನಿಗೆ, ಹನೋಕ್ ಯೆರೆದನಿಗೆ, ಯೆರೆದ್ ಮಹಲಲೇಲನಿಗೆ, ಮಹಲಲೇಲ್ ಕಯಿನನಿಗೆ ಹುಟ್ಟಿದರು.


ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು