Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:8 - ಕನ್ನಡ ಸತ್ಯವೇದವು C.L. Bible (BSI)

8 ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ತಾನು ಕೊಡುತ್ತೇನೆಂದು ವಾಗ್ದಾನ ಮಾಡಿದ್ದ ಸ್ಥಳಕ್ಕೆ ಪ್ರಯಾಣ ಮಾಡಬೇಕೆಂದು ಅಬ್ರಹಾಮನನ್ನು ಕರೆದನು. ಆ ಸ್ಥಳವು ಎಲ್ಲಿದೆಯೆಂಬುದು ಅವನಿಗೆ ತಿಳಿದಿರಲಿಲ್ಲ. ಅಬ್ರಹಾಮನಲ್ಲಿ ನಂಬಿಕೆಯಿದ್ದುದರಿಂದ, ದೇವರಿಗೆ ವಿಧೇಯನಾಗಿ ಪ್ರಯಾಣ ಮಾಡಲಾರಂಭಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಬ್ರಾಹಾಮಾನ್ ವಿಶ್ವಾಸಾನುಚ್ ದೆವಾನ್ ಬಲ್ವಲ್ಲ್ಯಾ ತನ್ನಾ ತೆಜಿ ಗೊಸ್ಟ್ ಆಯ್ಕುನ್ ಅಪ್ನಿ ಘೆವ್ಚೆ ಹೊಲ್ಲ್ಯಾ ಜಾಗ್ಯಾರ್ ಗೆಲೊ, ಅಪ್ನಿ ಜಾವ್ಚೊ ಹೊಲ್ಲೊ ಜಾಗೊ ಖೈಯ್ ಹಾಯ್ ಮನುನ್ ಗೊತ್ತ್ ನಸ್ಲ್ಯಾರ್ಬಿ ತೊ ಜಾವ್ಕ್ ಲಾಗ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:8
32 ತಿಳಿವುಗಳ ಹೋಲಿಕೆ  

ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.


ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.


ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು, ಕಾನಾನ್ ನಾಡಿನಲ್ಲೆಲ್ಲಾ ಸಂಚಾರ ಮಾಡಿಸಿದೆ. ಇಸಾಕನೆಂಬ ಮಗನನ್ನು ಕೊಟ್ಟು, ಅವನ ಸಂತಾನವನ್ನು ಹೆಚ್ಚಿಸಿದೆ.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.


ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”


ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.


ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.


ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.


ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.


ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.


ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.


ಅದಕ್ಕೆ ಅವನು, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ,” ಎಂದು ಉತ್ತರಿಸಿದ.


ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು