ಇಬ್ರಿಯರಿಗೆ 12:10 - ಕನ್ನಡ ಸತ್ಯವೇದವು C.L. Bible (BSI)10 ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆ ತಂದೆಗಳು ಕೆಲವು ದಿವಸಗಳ ಪ್ರಯೋಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಮ್ಚ್ಯಾ ಹ್ಯಾ ಜಗಾಚ್ಯಾ ಬಾಬಾನಿ ಉಲ್ಲ್ಯಾ ದಿಸಾಂಚ್ಯಾ ಜಿವನಾತ್ ಅಪ್ನಾಕ್ ಬರೆ ದಿಸ್ತಾ ತಸಿ ಶಿಕ್ಷಾ ಲಾವಲ್ಲ್ಯಾನಿ, ಖರೆ ದೆವ್ ಅಪ್ಲ್ಯಾ ಪವಿತ್ರ್ ಪಾನಾತ್ ಅಮ್ಕಾ ಭಾಗ್ ಘೆಯ್ ಸಾರ್ಕೆ ಕರುಕ್ ಸಾಟ್ನಿ ಮನುನ್ ಅಮ್ಚ್ಯಾಚ್ ಬರ್ಯ್ಯಾಸಾಟ್ನಿ ಅಮ್ಕಾ ಶಿಕ್ಷಾಕ್ ಲಾವ್ನ್ ಸಮಾ ವಾಟೆಕ್ ಹಾನ್ತಾ. ಅಧ್ಯಾಯವನ್ನು ನೋಡಿ |