Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:14 - ಕನ್ನಡ ಸತ್ಯವೇದವು C.L. Bible (BSI)

14 ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತುಮಿ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಸಮಾದಾನಾನ್ ಅನಿ ಪವಿತ್ರ್ ಹೊವ್ನ್ ಜಿವನ್ ಕರುಕ್ ಖಟ್ಪಟಾ, ಕೊನ್ ತೆಂಚ್ಯಾ ಜಿವನಾತ್ ಪವಿತ್ರ್ ಹೊವ್ನ್ ರ್‍ಹಾಯ್ನಾ ತೆನಿ ದೆವಾಕ್ ಬಗುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:14
48 ತಿಳಿವುಗಳ ಹೋಲಿಕೆ  

ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.


ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ : ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.


ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು?


ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.


ಶಾಂತಿಗೆ ಶತ್ರುಗಳಾದವರ ಒಡನಾಟ I ಸಾಕು ಆ ದೀರ್ಘ ಬಾಳಿನ ಸಂಕಟ II


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.


ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.


ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II


ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II


ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ I ನೇರಮನಸ್ಕರೆಲ್ಲ ಮಾಡುವರು ಅದನು ಸಮರ್ಥ II


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ನನ್ನ ಚರ್ಮ ಹೀಗೆ ಬಿರಿದು ಹಾಳಾದರೂ ದೇಹಧಾರಿಯಾಗಿಯೇ ನಾನು ನೋಡುವೆನು ದೇವರನು.


ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.


ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.


ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅವನಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು