Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:15 - ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮಲ್ಲಿ ಯಾರೂ ದೇವರ ಕೃಪೆಯನ್ನು ಕಳೆದುಕೊಳ್ಳದಂತೆ ಎಚ್ಚರದಿಂದಿರಿ. ನಿಮ್ಮಲ್ಲಿ ಯಾವನೂ ಚಿಗುರಿ ಬೆಳೆಯುವ ವಿಷದ ಬೇರಿನಂತಾಗದಂತೆ ಎಚ್ಚರಿಕೆಯಿಂದಿರಿ. ಅಂಥವನಿಂದ ನಿಮ್ಮ ಇಡೀ ಗುಂಪೇ ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮಿ ಕೊನ್‍ಬಿ ದೆವಾಚಿ ಕುರ್ಪಾ ಕಳ್ದುನ್ ಘೆಯ್‍ ನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ ತುಮ್ಚ್ಯಾತ್ ಕೊಡು ಝಾಡಾ ವಾಡಿನಸಿ ಸಾರ್ಕೆ ಹುಶಾರ್ಕಿಕ್ ರ್‍ಹಾವಾ, ತೆಚ್ಯಾ ವೈನಾ ಸಗ್ಳೆ ತಾಂಡೊಚ್ ಹಾಳ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:15
41 ತಿಳಿವುಗಳ ಹೋಲಿಕೆ  

ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.


ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.


ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?


ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.


ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.


ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.


ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.


ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.


ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,


ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.


ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:


ನೀವಾದರೋ ಸರ್ವೇಶ್ವರನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ ಇಸ್ರಯೇಲರ ಪಾಳೆಯವೇ ಶಾಪಕ್ಕೆ ಗುರಿಯಾಗಿ ನಾಶವಾದೀತು.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು