Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:16 - ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾವ ಜಾರನಾಗಲಿ, ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆ ವಹಿಸಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದೇ ಒಂದು ಊಟಕ್ಕೋಸ್ಕರ ತನ್ನ ಚೊಚ್ಚಲತನದ ಹಕ್ಕನ್ನು ಕೊಟ್ಟುಬಿಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮಲ್ಲಿ ಯಾರೂ ಮಾಡದಂತೆ ಜಾಗ್ರತೆಯಿಂದಿರಿ; ಪ್ರಾಪಂಚಿಕನಾದ ಏಸಾವನಂತೆ ಆಗದಿರಲು ಎಚ್ಚರದಿಂದಿರಿ. ಹಿರಿಯ ಮಗನಾದ ಏಸಾವನು ತನ್ನ ತಂದೆಯ ಸಮಸ್ತಕ್ಕೂ ವಾರಸುದಾರನಾಗುತ್ತಿದ್ದನು. ಆದರೆ ಅವನು ಒಂದು ಹೊತ್ತಿನ ಊಟಕ್ಕಾಗಿ ಎಲ್ಲವನ್ನೂ ಮಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತುಮ್ಚ್ಯಾತ್ ಕೊನ್ಬಿ ಅನೈತಿಕ್ ಸಮಂದ್ ಕರಿನಸ್ತಾನಾ ರ್‍ಹಾಂವ್ದಿತ್, ನಾ ಹೊಲ್ಯಾರ್ ಎಸಾವಾಚ್ಯಾ ಸಾರ್ಕೆ ಖೊಟ್ಯಾ ಚಾಲಿಚೊ ನಾಹೊಲ್ಯಾರ್ ದೆವಾಚೆ ಭಿಂಯೆನಸಲ್ಲೊ ಹೊವ್ನ್ ನಸ್ತಾನಾ ರ್‍ಹಾಂವ್ದಿತ್, ಎಸಾವಾನ್ ಎಕ್ ಜೆವ್ನಾಕ್ ಲಾಗುನ್ ಅಪ್ನಾಚೊ ಥೊರ್‍ಲ್ಯಾ ಲೆಕಾಚೊ ಹಕ್ಕ್ ಇಕುನ್ ಸೊಡ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:16
20 ತಿಳಿವುಗಳ ಹೋಲಿಕೆ  

ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.


ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.


ಅದಕ್ಕೆ ಏಸಾವನು, “ಯಕೋಬ’ ಎಂಬ ಹೆಸರು ಅವನಿಗೆ ತಕ್ಕುದಾಗಿದೆ; ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ. ಹಿಂದೆ ನನ್ನ ಜ್ಯೇಷ್ಠತನದ ಹಕ್ಕನ್ನು ಅಪಹರಿಸಿದ; ಈಗ ನನಗೆ ಬರಬೇಕಾಗಿದ್ದ ಆಶೀರ್ವಾದವನ್ನು ಕಿತ್ತುಕೊಂಡಿದ್ದಾನೆ,” ಎಂದು ಹೇಳಿ ತನ್ನ ತಂದೆಯನ್ನು ನೋಡಿ, “ನನಗೆಂದೇ ನಿಮ್ಮಲ್ಲಿ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು