Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:18 - ಕನ್ನಡ ಸತ್ಯವೇದವು C.L. Bible (BSI)

18 ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18-19 ನೀವು ಮುಟ್ಟಬಹುದಾದ ಮತ್ತು ಬೆಂಕಿ ಹೊತ್ತಿದಂಥ ಬೆಟ್ಟಕ್ಕೂ, ಕಾರ್ಮೋಡ, ಕಗ್ಗತ್ತಲೆ, ಬಿರುಗಾಳಿ, ತುತ್ತೂರಿಯ ಶಬ್ದ, ಮಾತುಗಳ ಧ್ವನಿ ಎಂಬಿವುಗಳ ಬಳಿಗಲ್ಲ ನೀವು ಬಂದಿರುವುದು. ಆ ಧ್ವನಿಯನ್ನು ಕೇಳಿದವರು ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನೀವು ಮುಟ್ಟುವದಕ್ಕೆ ಸಾಧ್ಯವಾದಂಥ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮೋಡದ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ಒಂದು ಹೊಸ ಸ್ಥಳಕ್ಕೆ ಬಂದಿರುವಿರಿ. ಅದು ಇಸ್ರೇಲಿನ ಜನರು ಬಂದ ಬೆಟ್ಟದ ಸ್ಥಳವಲ್ಲ. ಮುಟ್ಟುವುದಕ್ಕೆ ಸಾಧ್ಯವಾಗುವಂತಹ ಮತ್ತು ಬೆಂಕಿ ಹತ್ತಿಕೊಂಡಿರುವಂತಹ ಬೆಟ್ಟದ ಬಳಿಗೆ ನೀವು ಬಂದಿಲ್ಲ. ನೀವು ಕಗ್ಗತ್ತಲೆ, ದುಃಖ ಮತ್ತು ಬಿರಗಾಳಿಯ ಬಳಿಗೆ ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತುಮಿ ನ್ಹವ್ಯಾ ಜಾಗ್ಯಾರ್ ಯೆಲ್ಲ್ಯಾಸಿ, ತೊ ಇಸ್ರಾಯೆಲಾಚಿ ಲೊಕಾ ಯೆಲ್ಲೊ ಮಡ್ಡಿಚೊ ಜಾಗೊ ನ್ಹಯ್ ಅಪ್ಡುಕ್ ಹೊಯ್ ನಸಲ್ಲ್ಯಾ ಆಗ್ ಲಾಗುನ್ ಹೊತ್ತ್ಯಾ ಮಡಿಚ್ಯಾ ಜಾಗ್ಯಾರ್ ಯೆವ್ಕ್ ನ್ಯಾಸಿ ತುಮಿ ಮೊಟೊ ಕಾಳೊಕ್ ,ಕಾಳೊ ಮೊಡ್ , ಅನಿ ಮೊಟ್ಯಾ ವಾರಾಚ್ಯಾ ಜಗೊಳ್ ಯೆವ್ಕ್ ನ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:18
11 ತಿಳಿವುಗಳ ಹೋಲಿಕೆ  

ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ಸರ್ವೇಶ್ವರನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಯೇಲರಿಗೆ ಕಾಣಿಸಿತು.


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?


ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.


ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.


ನೀವು ಆ ಅಗ್ನಿಜ್ವಾಲೆಯನ್ನು ನೋಡಿ ಭಯಪಟ್ಟಿರಿ; ಬೆಟ್ಟವನ್ನು ಹತ್ತದೆ ಹೋದಿರಿ! ಆಗ ನಾನು ಸರ್ವೇಶ್ವರನಿಗೂ ನಿಮಗೂ ನಡುವೆ ನಿಂತು ಅವರು ನುಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅವರು ನುಡಿದದ್ದು ಇದು:


ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು