Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:19 - ಕನ್ನಡ ಸತ್ಯವೇದವು C.L. Bible (BSI)

19 ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ತುತೂರಿಯ ಧ್ವನಿಯ ಬಳಿಗಾಗಲಿ ಅಥವಾ ನಿಮ್ಮೊಂದಿಗೆ ಮಾತನಾಡುವ ಸ್ವರದ ಬಳಿಗಾಗಲಿ ಬಂದಿಲ್ಲ. ಜನರು ಆ ಧ್ವನಿಯನ್ನು ಕೇಳಿದಾಗ, ಮತ್ತೊಂದು ಮಾತನ್ನು ತಮಗೆ ಹೇಳಬಾರದೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು, ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೊ ತುತ್ತುರಿಚೊ ನಾದ್ ನಾ ತರ್ ತಸ್ಲ್ಯಾ ಬೊಲ್ನ್ಯಾಚಿ ಗೊಸ್ಟಿಯಾ ಆಯ್ಕಲ್ಯಾನಿ , ಅನಿ ಫಿಡೆ ತಸ್ಲ್ಯಾ ಗೊಸ್ಟಿಯಾ ಬೊಲ್ತಲೆ ನಕ್ಕೊ ಮನುನ್ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:19
13 ತಿಳಿವುಗಳ ಹೋಲಿಕೆ  

ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.


ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು.


ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ?


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಹೇಳಿದರು: “ಇಸ್ರಯೇಲರಿಗೆ ಹೀಗೆಂದು ತಿಳಿಸು - ‘ನಾನು ಆಕಾಶದಿಂದ ನಿಮ್ಮೊಡನೆ ಮಾತಾಡಿದ್ದೇನೆಂದು ನಿಮಗೆ ಗೊತ್ತಿದೆ.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು