Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:22 - ಕನ್ನಡ ಸತ್ಯವೇದವು C.L. Bible (BSI)

22 ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ನೀವು ಚೀಯೋನ್ ಪರ್ವತಕ್ಕೂ, ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ, ಉತ್ಸವ ಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಖರೆ ತುಮಿ ಸಿಯೊನ್ ಮಡ್ದಿಕ್, ಝಿತ್ತೊ ದೆವ್ ರಾತಲ್ಯಾ ಶಾರಾತ್ ಸರ್ಗಾಚ್ಯಾ ಜೆರುಜಲೆಮಾಕ್ ಯೆಲ್ಲ್ಯಾಸಿ, ತುಮಿ ಹಜಾರಾನಿ ಹಜಾರ್ ದೆವ್‍ದುತಾ ಖುಶಿ ಕರ್ತಾಲ್ಯಾ ಜಾಗ್ಯಾರ್ ಯೆಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:22
49 ತಿಳಿವುಗಳ ಹೋಲಿಕೆ  

ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.


ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.


ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.


ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.


ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”


ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.


ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.


ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.


ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”


ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.


ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ : “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”


ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.


ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;


ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:


ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!


ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.


ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”


ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು : II


ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?


ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!


ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


“ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “


ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;


ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.


ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.


ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು