Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:23 - ಕನ್ನಡ ಸತ್ಯವೇದವು C.L. Bible (BSI)

23 ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಪರಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಚೊಚ್ಚಲ ಮಕ್ಕಳ ಸಭೆಗೂ, ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ, ಪರಿಪೂರ್ಣರಾಗಿರುವ ನೀತಿವಂತರ ಆತ್ಮಗಳ ಬಳಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಪರಲೋಕದಲ್ಲಿ ಹೆಸರು ಬರಸಿಕೊಂಡಿರುವ ಚೊಚ್ಚಲಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಸಿದ್ಧಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರ ಚೊಚ್ಚಲು ಮಕ್ಕಳ ಸಭೆಗೆ ನೀವು ಬಂದಿರುವಿರಿ. ಅವರ ಹೆಸರುಗಳನ್ನು ಪರಲೋಕದಲ್ಲಿ ಬರೆಯಲಾಗಿದೆ. ನೀವು ಜನರಿಗೆಲ್ಲ ತೀರ್ಪು ನೀಡುವ ದೇವರ ಬಳಿಗೂ ಪರಿಪೂರ್ಣರನ್ನಾಗಿ ಮಾಡಲ್ಪಟ್ಟ ಒಳ್ಳೆಯ ಜನರ ಆತ್ಮಗಳ ಬಳಿಗೂ ಬಂದಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತುಮಿ ಪೈಲೆ ಉಪಾಜಲ್ಲ್ಯಾ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಸರ್‍ಗಾ ವರ್ತಿ ತೆಂಚಿ ನಾವಾ ಲಿವಲ್ಲಿ ಹಾತ್, ತುಮಿ ದೆವಾಕ್ಡೆ ಯೆಲ್ಯಾಸಿ, ತೊ ಸಗ್ಳ್ಯಾಂಚಿ ನ್ಯಾಯ್ ಕರ್ನಾರೊ, ನಿತಿವಂತಾಂಚೆ ಆತ್ಮೆ ಸಂಪುರ್ನ್ ಕರ್ತಲ್ಯಾಂಚ್ಯಾ ಇದ್ರಾಕ್ ಇಬೆ ಹಾಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:23
45 ತಿಳಿವುಗಳ ಹೋಲಿಕೆ  

ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.


ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.


ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.


ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.


ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?" ಎಂದನು.


ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.


ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II


ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?


ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.


ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.


ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II


ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.


ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II


ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.


“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.


ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.


ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.


“ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು