Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:24 - ಕನ್ನಡ ಸತ್ಯವೇದವು C.L. Bible (BSI)

24 ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ, ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರಿಂದ ಹೊಸ ಒಡಂಬಡಿಕೆಯನ್ನು ತಂದಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮ ಸಂಗತಿಗಳನ್ನು ನಮಗೆ ತಿಳಿಸುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ನ್ಹವ್ಯಾ ಕರಾರಾಚೊ ಮಧ್ಯಸ್ತ್ ಜೆಜುಕ್ಡೆ ಅನಿ ಅಬೆಲಾಚ್ಯಾ ರಗ್ತಾಚ್ಯಾನ್ಕಿ ಜಾಸ್ತಿ ಅರ್ಥಾಚ್ಯಾ ಸಿಪಡಲ್ಲ್ಯಾ ರಗ್ತಾಕ್ಡೆ ತುಮಿ ಯೆಲ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:24
24 ತಿಳಿವುಗಳ ಹೋಲಿಕೆ  

ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಅಂತೆಯೇ ಗುಡಾರದ ಮೇಲೂ ದೇವಾರಾಧನೆಗೆ ಬೇಕಾದ ಎಲ್ಲಾ ಪೂಜಾಸಾಮಗ್ರಿಗಳ ಮೇಲೂ ಆ ರಕ್ತವನ್ನು ಚಿಮುಕಿಸಿದನು.


ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಆದರೆ ದೇವರು ಆ ಒಡಂಬಡಿಕೆಗೆ ಸೇರಿದ ಜನರನ್ನು ಆರೋಪಿಸುತ್ತಾ ಇಂತೆಂದಿದ್ದಾರೆ : “ಇಗೋ, ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ್ಯ ವಂಶದವರೊಂದಿಗೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಕಾಲವು ಬರಲಿದೆ, ಎಂದರು ಸರ್ವೇಶ್ವರ.


ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.


ಒಂದೇ ಪಕ್ಷ ಇರುವಾಗ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬರೇ.


ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.


ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು