Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:26 - ಕನ್ನಡ ಸತ್ಯವೇದವು C.L. Bible (BSI)

26 ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು. ಈಗಲಾದರೋ ಆತನು, “ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ” ಎಂದು ವಾಗ್ದಾನಮಾಡಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನ ಧ್ವನಿಯು ಆ ಕಾಲದಲ್ಲಿ ಭೂವಿುಯನ್ನು ಕದಲಿಸಿತು; ಈಗಲಾದರೋ ಆತನು - ಇನ್ನೊಂದೇ ಸಾರಿ ನಾನು ಭೂವಿುಯನ್ನು ಮಾತ್ರವಲ್ಲದೆ ಪರಲೋಕವನ್ನೂ ನಡುಗಿಸುವೆನೆಂದು ವಾಗ್ದಾನಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆತನು ಮುಂಚೆ ಮಾತನಾಡಿದಾಗ, ಆತನ ಧ್ವನಿಯು ಭೂಮಿಯನ್ನು ನಡುಗಿಸಿತು. ಆದರೆ ಈಗ ಆತನು, “ಮತ್ತೊಂದು ಸಾರಿ ನಾನು ಭೂಮಿಯನ್ನು ನಡುಗಿಸುತ್ತೇನೆ, ಪರಲೋಕವನ್ನೂ ನಡುಗಿಸುತ್ತೇನೆ” ಎಂದು ವಾಗ್ದಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅದ್ದಿ ತೊ ಬೊಲ್ತಾನಾ ತೆಚ್ಯಾ ಧನಾಚ್ಯಾ ಅವಾಜಾಕ್ ಜಿಮಿನ್ ಹಾಲ್ಲಿ, ಖರೆ ಅತ್ತಾ ತೆನಿ ಅನಿ ಗೊಸ್ಟಿ ದಿಲ್ಲಿ ಹಾಯ್ ಅನಿ ಎಗ್ದಾ ಜಿಮಿನ್ ಎವ್ಡೆಚ್ ನ್ಹಯ್ ಅಂತರಾಳ್ ಬಿ ಮಿಯಾ ಹಾಲ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:26
12 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”


ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು