Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:27 - ಕನ್ನಡ ಸತ್ಯವೇದವು C.L. Bible (BSI)

27 “ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ಇನ್ನೊಂದೇ ಸಾರಿ,” ಎಂಬ ಈ ಮಾತನ್ನು ಯೋಚಿಸಿದರೆ, ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದ್ದರಿಂದ ತೆಗೆದುಹಾಕಲ್ಪಡುತ್ತವೆಂಬುದು ಸ್ಪಷ್ಟವಾಗುತ್ತದೆ. ಆಗ, ಕದಲಿಸದೇ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಇನ್ನೊಂದೇ ಸಾರಿ ಎಂಬೀ ಮಾತನ್ನು ಯೋಚಿಸಿದರೆ ಕದಲಿಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡಬೇಕೆಂಬದು ಸ್ಪಷ್ಟವಾಗುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಮತ್ತೊಂದು ಸಾರಿ” ಎಂಬ ಮಾತುಗಳು ಸೃಷ್ಟಿಗೊಂಡ ಎಲ್ಲವೂ ನಾಶವಾಗುತ್ತವೆ ಎಂಬುದನ್ನು ನಮಗೆ ಸ್ಪಷ್ಟಪಡಿಸುತ್ತವೆ. ಅವುಗಳನ್ನು ನಡುಗಿಸಲು ಸಾಧ್ಯ. ನಡುಗಿಸಲಾಗದಂಥವುಗಳು ಮಾತ್ರ ಸ್ಥಿರವಾಗಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಎಗ್ದಾ ಮಟ್ಲ್ಯಾರ್, ಹ್ಯಾ ಗೊಸ್ಟಿಯಾಂಚೊ ಅರ್ತ್ ಕಾಯ್ ಮಟ್ಲ್ಯಾರ್, ಹಾಲ್ತಲಿ ಜಿನ್ಸಾ ಗಟ್ಟ್ ರಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:27
19 ತಿಳಿವುಗಳ ಹೋಲಿಕೆ  

ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.


ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.


ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.


“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.


“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.


ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.


ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ.


ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.


ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು