Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:3 - ಕನ್ನಡ ಸತ್ಯವೇದವು C.L. Bible (BSI)

3 ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಆತನನ್ನು ಆಲೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸುವನ್ನು ಕುರಿತು ಯೋಚಿಸಿರಿ. ಪಾಪಪೂರಿತವಾದ ಜನರು ಆತನ ವಿರುದ್ಧವಾಗಿ ಕೆಟ್ಟದ್ದನ್ನು ಮಾಡುವಾಗ ಆತನು ತಾಳ್ಮೆಯಿಂದ ಇದ್ದನು. ಅದೇ ರೀತಿ ನೀವೂ ತಾಳ್ಮೆಯಿಂದಿರಬೇಕು ಮತ್ತು ಧೈರ್ಯಗೆಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜೆಜುಕ್ ಪಾಪಾತ್ ಹೊತ್ತ್ಯಾ ಲೊಕಾಕ್ನಿ ವಿರೊದ್ ಹೊವ್ನ್ ಬುರ್ಶೆ ಸಾಂಗಟ್ಲ್ಯಾರ್‍ಬಿ ತೆನಿ ತಾಳುನ್ ಘೆಟ್ಲ್ಯಾನ್‍, ತನ್ನಾ ತುಮಿಬಿ ತಾಳುನ್ ರ್‍ಹಾವ್ಚೆ, ಧೈರ್ ಸೊಡುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:3
46 ತಿಳಿವುಗಳ ಹೋಲಿಕೆ  

ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.


ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.


ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು


ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.


ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.


ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ.


ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.


ಅದಕ್ಕೆ ಫರಿಸಾಯರು, “ಈಗ ನೀನು ನಿನ್ನ ಪರವಾಗಿಯೇ ಸಾಕ್ಷಿ ನೀಡುತ್ತಿರುವೆ. ಅಂಥ ಸಾಕ್ಷಿಗೆ ಬೆಲೆಯಿಲ್ಲ,” ಎಂದರು.


‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.


ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.


ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.


ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.


ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಅನಂತರ ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು.


ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.


ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.


“ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.


ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.


ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು