Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:4 - ಕನ್ನಡ ಸತ್ಯವೇದವು C.L. Bible (BSI)

4 ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ ರಕ್ತವನ್ನು ಸುರಿಸುವಷ್ಟು ಹೋರಾಡಲಿಲ್ಲವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ಪ್ರಾಣಾಪಾಯದ ತನಕ ಇನ್ನೂ ಅದನ್ನು ಎದುರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಪಾಪದ ವಿರುದ್ಧ ಹೋರಾಡುತ್ತಿದ್ದರೂ ನಿಮ್ಮ ಹೋರಾಟಗಳು ನಿಮ್ಮನ್ನು ಸಾವಿನ ಸಮೀಪಕ್ಕೆ ಇನ್ನೂ ತಂದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮಿ ಪಾಪಾಕ್ ವಿರೊದ್ ಹೊವ್ನ್ ಹೊರಾಟ್ ಕರುನ್ಗೆತ್ ರ್‍ಹಾತಾನಾ, ತುಮ್ಚ್ಯಾ ಹೊರಾಟಾನ್ ತುಮ್ಕಾ ಮರ್‍ನಾಕ್ ಹಾನುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:4
12 ತಿಳಿವುಗಳ ಹೋಲಿಕೆ  

ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.


ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು