Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:5 - ಕನ್ನಡ ಸತ್ಯವೇದವು C.L. Bible (BSI)

5 ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನು ಮರೆತುಬಿಟ್ಟಿದ್ದೀರೋ? ಅದೇನೆಂದರೆ, “ನನ್ನ ಮಗನೇ, ಕರ್ತನ ಶಿಕ್ಷೆಯನ್ನು ಕಡೆಗಣಿಸಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ - ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀವು ದೇವರ ಮಕ್ಕಳಾಗಿದ್ದೀರಿ. ಆತನು ನಿಮಗೆ ನೆಮ್ಮದಿಯ ಮಾತುಗಳನ್ನು ನುಡಿಯುತ್ತಾನೆ. ನೀವು ಆ ಮಾತುಗಳನ್ನು ಮರೆತಿರುವಿರಿ: “ಮಗನೇ, ಪ್ರಭುವಿನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಪ್ರಭುವು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದೆವಾಚಿ ಪೊರಾ ತುಮಿ ಹೊಲ್ಯಾಶಿ, ತೊ ಸುಖಾಚೆ ಬೊಲ್ನೆ ಬೊಲ್ತಾ, ತಿ ಗೊಸ್ಟಿಯಾ ಸಗ್ಳಿ ಇಸರ್ತ್ಯಾಶಿ. ತೆಕಾ ಧನಿಯಾಚಿ ಶಿಕ್ಷಾ ತಿರಸ್ಕಾರ್ ಕರುನಕ್ಕೊ, ಧನಿ ತುಮ್ಕಾ ಗಾಳಿಯಾ ದಿತಾನಾ ಬೆಜಾರ್ ಕರುನಕ್ಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:5
33 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II


ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ II


ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ?


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.


ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ಅಂಥ ಮನುಷ್ಯನು ದೇವರಿಗೆ: ‘ಪ್ರಾಯಶ್ಚಿತ್ತ ಮಾಡಿರುವೆ, ಇನ್ನು ಮುಂದೆ ಪಾಪಮಾಡೆ.


ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ,


ಆಗ ಆ ಮಹಿಳೆಯರಿಗೆ ಯೇಸುಸ್ವಾಮಿಯ ಈ ಮಾತುಗಳು ಜ್ಞಾಪಕಕ್ಕೆ ಬಂದವು.


ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II


ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು?


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು