Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 12:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸುತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!” ಎಂಬುದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಧನಿ ತೊ ಪ್ರೆಮ್ ಕರ್‍ತಲ್ಯಾಕ್ನಿ ಶಿಕ್ಷಾ ದಿತಾ, ಕೊನಾಕ್ ಲೆಕ್ ಮನುನ್ ಮಾನುನ್ ಘೆತಾ ತೆಕಾಚ್ ಶಿಕ್ಷಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 12:6
19 ತಿಳಿವುಗಳ ಹೋಲಿಕೆ  

ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


ತನ್ನ ಮುದ್ದು ಮಗನನ್ನು ತಂದೆ ಗದರಿಸುವಂತೆ, ಸರ್ವೇಶ್ವರ ತಾನು ಪ್ರೀತಿಸುವವರನ್ನು ಗದರಿಸುತ್ತಾನೆ.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಬೆತ್ತಹಿಡಿಯದ ತಂದೆ ಮಗನಿಗೆ ಶತ್ರು; ಎಚ್ಚರಿಕೆಯಿಂದ ಶಿಕ್ಷಿಸುವ ತಂದೆ ಮಗನಿಗೆ ಮಿತ್ರನು.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.


ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು !


ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.


ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.


ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ.


ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು?


ಇವರು ಮೋವಾಬ್ ನಾಡಿನಲ್ಲಿ ವಾಸಿಸುತ್ತಿದ್ದಾಗ ಎಲಿಮೆಲೆಕನು ಮರಣ ಹೊಂದಿದನು. ವಿಧವೆಯಾದ ನವೊಮಿ ಇಬ್ಬರು ಗಂಡುಮಕ್ಕಳೊಡನೆ ಅಲ್ಲೇ ಉಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು