ಇಬ್ರಿಯರಿಗೆ 12:9 - ಕನ್ನಡ ಸತ್ಯವೇದವು C.L. Bible (BSI)9 ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಈ ಲೋಕದಲ್ಲಿ ನಮ್ಮೆಲ್ಲರನ್ನೂ ಶಿಕ್ಷಿಸಿದಂಥ ತಂದೆಗಳು ನಮಗಿದ್ದರು. ನಾವು ಅವರನ್ನು ಗೌರವಿಸಿದೆವು. ಆದ್ದರಿಂದ ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಂದ ದಂಡನೆಗಳನ್ನು ಸ್ವೀಕರಿಸಿಕೊಳ್ಳುವುದು ಬಹಳ ಮುಖ್ಯವಾದದ್ದು. ನಾವು ಹೀಗೆ ಮಾಡಿದರೆ ಜೀವವನ್ನು ಹೊಂದಿಕೊಳ್ಳುವೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಅಮ್ಕಾ ಶಿಕ್ಷಾ ದಿವ್ನ್ ಸಮಾ ವಾಟೆನ್ ಹಾನಿನಸಲ್ಲೆ ಆಂಗಾಕ್ ಸಮಂದ್ ಪಡಲೆ ಬಾಬಾ ಹಾತ್ ತೆಂಕಾ ಅಮಿ ಮಾನ್ ದಿತಾಂವ್, ತಸೆ ಹೊಲ್ಯಾರ್ ಆತ್ಮಿಕ್ ಬಾಬಾಕ್ ಸ್ವಿಕಾರ್ ಕರುನ್ ಜಿವ್ ಖಮ್ವುನ್ ಘೆವ್ವೆ ನ್ಹಯ್ ? ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.