Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:16 - ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ಪರೋಪಕಾರವನ್ನೂ ಧರ್ಮಮಾಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದಲ್ಲದೆ ಪರೋಪಕಾರವನ್ನೂ ದಾನಧರ್ಮವನ್ನೂ ಮರೆಯದಿರಿ. ಇವೇ ದೇವರಿಗೆ ಸಮರ್ಪಕವಾದ ಯಜ್ಞಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಕಶ್ಯಾಕ್ ಮಟ್ಲ್ಯಾರ್, ದುಸ್ರ್ಯಾಕ್ನಿ ಬರೆ ಕರುಕ್, ಅನಿ ದಾನ್ ದಿವ್ಕ್ ಇಸ್ರು ನಕಾಸಿ, ಅಸ್ಲಿ ಬಲಿಯಾಚ್ ದೆವಾಕ್ ಮಾನ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:16
22 ತಿಳಿವುಗಳ ಹೋಲಿಕೆ  

ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನಿನ್ನ ವಿಶ್ವಾಸವನ್ನು ಬೇರೆಯವರಿಗೂ ನೀಡಿ ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ಎಲ್ಲಾ ಒಳಿತಿನ ಅರಿವನ್ನು ಹೆಚ್ಚಿಸಿಕೊಳ್ಳಬೇಕೆಂಬುದೇ ನನ್ನ ಪ್ರಾರ್ಥನೆ.


ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ.


ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.


ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು