Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:18 - ಕನ್ನಡ ಸತ್ಯವೇದವು C.L. Bible (BSI)

18 ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಮನಸ್ಸಿನಿಂದ ಒಳ್ಳೇ ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಮಗೋಸ್ಕರ ಪ್ರಾರ್ಥಿಸುವುದನ್ನು ಮುಂದುವರಿಸಿರಿ. ನಾವು ಯಾವಾಗಲೂ ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುವುದರಿಂದ, ನಮ್ಮ ಹೃದಯಗಳು ಶುದ್ಧವಾಗಿವೆ ಎಂಬ ನಂಬಿಕೆ ನಮಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಅಮ್ಚ್ಯಾಸಾಟ್ನಿ ಕನ್ನಾಬಿ ಮಾಗ್ನೆ ಕರುಂಗೆತ್ ರ್‍ಹಾವಾ ಸಗ್ಳ್ಯಾ ಸಂಗ್ತಿಯಾತ್ನಿ, ಅನಿ ಪರಿಸ್ಥಿತಿತ್ನಿ ಖಲೆ ಬರೆ ಹಾಯ್ ತೆ ಎವ್ಡೆಚ್ ಕರುಚೆ ಮನ್ತಲಿ ಅಮ್ಚಿ ಆಶಾ. ತಸೆ ಮನುನ್ ಅಮ್ಚೊ ಭುತ್ತುರ್ಲೊ ಮನ್ ನಿತಳ್ ಹಾಯ್ ಮನುನ್ ಅಮ್ಕಾ ಖಾತ್ರಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:18
16 ತಿಳಿವುಗಳ ಹೋಲಿಕೆ  

ಸಹೋದರರೇ, ನಮಗಾಗಿಯೂ ಪ್ರಾರ್ಥಿಸಿರಿ.


ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.


ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.


ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.


ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.


ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು