Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:20 - ಕನ್ನಡ ಸತ್ಯವೇದವು C.L. Bible (BSI)

20 ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20-21 ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಶಾಶ್ವತವಾದ ಒಡಂಬಡಿಕೆಯನ್ನು ನಿಶ್ಚಯಪಡಿಸುವದಕ್ಕಾಗಿ ತನ್ನ ರಕ್ತವನ್ನು ಸುರಿಸಿಕೊಂಡು ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ ಶಾಂತಿದಾಯಕನಾದ ದೇವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20-21 ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಶಾಸ್ವತ್ ಕರಾರ್ ಘಟ್ಟ್ ಕರುಸಾಟ್ನಿ ಅಪ್ಲೆ ರಗಾತ್ ವೊತುನ್ ದೆವಾಚೊ ತಾಂಡೊ ಮನ್ತಲ್ಯಾಕ್ ಮೊಟಿ ರಾಕ್ವನ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ಧನಿಯಾ ಜೆಜುಕ್ ಮರಲ್ಲ್ಯಾಕ್ನಾ ಝಿತ್ತೊ ಕರಲ್ಲೊ ಶಾಂತ್ಪಾನಾಚೊ ದೆವ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:20
53 ತಿಳಿವುಗಳ ಹೋಲಿಕೆ  

“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.


ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II


ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.


ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.


ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.


ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.


ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ಯಕೋಬನಿಗೆ ರಾಜಶಾಸನವಾಗಿ ಕೊಟ್ಟದ್ದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು: II


ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.


ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!


ಹೀಗೆ ಚಿಮುಕಿಸುವಾಗ, “ದೇವರು ನಿಮಗೆ ಆಜ್ಞಾಪಿಸಿರುವ ಒಡಂಬಡಿಕೆಯ ರಕ್ತವಿದು,” ಎಂದು ಹೇಳಿದನು.


ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.


ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.


ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.


ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.


“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.


ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.


ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:


ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.


ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.


ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.


ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು.


ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.


ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”


ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ


ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


“ಕ್ರಿಸ್ತಯೇಸುವನ್ನು ಸಾವಿನಿಂದ ಮೇಲಕ್ಕೆ ಕರೆತರಲು ಪಾತಾಳಕ್ಕೆ ಇಳಿದುಹೋಗುವವರು ಯಾರು?” ಎಂದಾಗಲೀ ನಿನ್ನ ಮನದಲ್ಲಿ ನೀನು ಪ್ರಶ್ನಿಸಿಕೊಳ್ಳಬೇಕಾಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು