ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!
ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.
ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು : “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.
ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.
ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.
ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ.