Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:4 - ಕನ್ನಡ ಸತ್ಯವೇದವು C.L. Bible (BSI)

4 ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಂಡಹೆಂಡರ ಸಂಬಂಧವು ನಿಷ್ಕಳಂಕವಾಗಿರಬೇಕು. ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾ ಮದ್ದಿ ಲಗ್ನಾಚ್ಯಾ ಜಿವನಾಕ್ ಪಾಜೆ ಹೊಲ್ಲೊ ಮಾನ್ ಗಾವುಂದಿತ್ ಅನಿ ಘೊವ್ ಬಾಯ್ಕೊಚ್ಯಾ ಮದ್ಲೊ ವಿಶ್ವಾಸ್ ಕಪಟ್ ನಸಲ್ಲೊ ಹೊವ್ನ್ ರಾಂವ್ದಿತ್; ಕಶ್ಯಾಕ್ ಮಟ್ಲ್ಯಾರ್, ಪೊಜ್ಡೆಪಾನ್ ಅನಿ ವೆಭಿಚಾರ್ ಕರ್‍ತಲ್ಯಾಂಚಿ ದೆವ್ ಝಡ್ತಿ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:4
33 ತಿಳಿವುಗಳ ಹೋಲಿಕೆ  

ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.


ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,


ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು.


ತನ್ನ ಕುಟುಂಬವನ್ನು ಜವಾಬ್ದಾರಿಯುತವಾಗಿ ನಡೆಸುವವನೂ ಮಕ್ಕಳನ್ನು ಶಿಸ್ತಿನಲ್ಲಿ ಬೆಳೆಸಿ ಅವರಿಂದ ಗೌರವವನ್ನು ಪಡೆದುಕೊಳ್ಳುವವನೂ ಆಗಿರಬೇಕು.


ಈ ರೀತಿ ನಿಶ್ಚಯವಾದ ಕನ್ಯೆಯನ್ನು ಮದುವೆಮಾಡಿಕೊಳ್ಳುವುದು ಒಳ್ಳೆಯದೇ, ಮದುವೆ ಮಾಡಿಕೊಳ್ಳದಿರುವುದು ಇನ್ನಷ್ಟು ಒಳ್ಳೆಯದೇ.


ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು.


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.


ಪರಸ್ತ್ರೀ ಸಂಭೋಗದಿಂದ ಅಶುದ್ಧರಾಗಬಾರದು.


“ಒಬ್ಬನು ಪರನ ಹೆಂಡತಿಯೊಡನೆ ವ್ಯಭಿಚಾರ ಮಾಡಿ ಸಿಕ್ಕಿಬಿದ್ದರೆ ಆ ಸ್ತ್ರೀಪುರುಷ ಇಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಇಂಥ ಕೇಡನ್ನು ಇಸ್ರಯೇಲರಿಂದ ತೆಗೆದುಹಾಕಬೇಕು.


ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.


ನರಕ ಕೂಪದವರೆಗೆ ಬೆಂಕಿಯಾಗುತ್ತಿತ್ತು ನನ್ನ ಆದಾಯವನ್ನೆಲ್ಲ ನಿರ್ಮೂಲಮಾಡುತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು