Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:5 - ಕನ್ನಡ ಸತ್ಯವೇದವು C.L. Bible (BSI)

5 ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದ್ರವ್ಯಾಶೆಯಿಲ್ಲದವರಾಗಿರಿ; ನಿಮಗಿರುವವುಗಳಲ್ಲಿ ತೃಪ್ತರಾಗಿರಿ; ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ, ಎಂದಿಗೂ ತೊರೆಯುವದಿಲ್ಲವೆಂದು ದೇವರು ತಾನೇ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹಣದ ಮೇಲೆ ನಿಮಗಿರುವ ವ್ಯಾಮೋಹವನ್ನು ದೂರತಳ್ಳಿರಿ. ನಿಮ್ಮಲ್ಲಿರುವ ವಸ್ತುಗಳಲ್ಲಿ ತೃಪ್ತಿಯಿಂದಿರಿ. ದೇವರು ಹೀಗೆ ಹೇಳಿದ್ದಾನೆ: “ನಾನು ನಿಮ್ಮನ್ನು ಎಂದೆಂದಿಗೂ ಕೈಬಿಡುವುದಿಲ್ಲ. ನಾನು ನಿಮ್ಮನ್ನು ಎಂದೆಂದಿಗೂ ತೊರೆದುಬಿಡುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಪೈಶಾಂಚಿ ಆಶಾ ತುಮ್ಚ್ಯಾ ಜಿವನಾಕ್ ಪ್ರೆರನ್ ಹೊಯ್‍ನಸ್ತಾನಾ ರ್‍ಹಾಂವ್ದಿತ್, ತುಮ್ಚ್ಯಾಕ್ಡೆ ಕವ್ಡೆ ಹಾಯ್ ತವ್ಡ್ಯಾತುಚ್ ತೃಪ್ತಿ ಹೊವ್ನ್ ರ್‍ಹಾವ್ಕ್ ಶಿಕಾ, ದೆವಾನುಚ್ ಮಟಲ್ಲೆ ಹಾಯ್ ಮಿಯಾ ತುಮ್ಕಾ ಕಳ್ದುನ್ ಘೆಯ್ನಾ ಮಿಯಾ ತುಮ್ಕಾ ಸೊಡುನ್ ಘಾಲಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:5
46 ತಿಳಿವುಗಳ ಹೋಲಿಕೆ  

ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.


ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.


ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.


ಸಜ್ಜನ ದಿಕ್ಕಿಲ್ಲದಿರುವುದನು, ಅವನ ಸಂತತಿ ಭಿಕ್ಷೆ ಬೇಡುವುದನು I ನಾ ಕಾಣೆನು, ವೃದ್ಧ ನಾನೆಂದೂ ಕಾಣೆನು, ಬಾಲ್ಯದಿಂದ ಕಾಣೆನು II


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”


ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.


“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II


ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.


ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II


ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.


ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.


ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.


ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.


ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.


ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.


ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.


ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ.


ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.


ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!


ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.


ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.


“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.


ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ.


ಆಗ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು?” ಎಂದನು. ಯಕೋಬನು, “ನನಗೇನೂ ಕೊಡಬೇಕಾಗಿಲ್ಲ; ಒಂದೇ ಒಂದು ಕಾರ್ಯಕ್ಕೆ ಒಪ್ಪಿಗೆ ನೀಡಿದರೆ, ನಾನು ಮತ್ತೆ ನಿಮ್ಮ ಮಂದೆಯನ್ನು ಮೇಯಿಸಿಕೊಂಡು ಬರುತ್ತೇನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು