Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:6 - ಕನ್ನಡ ಸತ್ಯವೇದವು C.L. Bible (BSI)

6 ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆದದರಿಂದ - ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು? ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು. ನಿಮಗೆ ದೇವರ ವಾಕ್ಯವನ್ನು ತಿಳಿಸಿದ ನಿಮ್ಮ ಸಭಾನಾಯಕರನ್ನು ಜ್ಞಾಪಕಮಾಡಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಾವು ಖಚಿತವಾಗಿ ಹೀಗೆ ಹೇಳಬಹುದು: “ಪ್ರಭುವೇ ನನ್ನ ಸಹಾಯಕನು; ನಾನು ಹೆದರುವುದಿಲ್ಲ. ಜನರು ನನಗೆ ಏನೂ ಮಾಡಲಾರರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತಸೆ ಮನುನ್ ಖರ್ಯಾ ವಿಶ್ವಾಸಾನ್ ಅಮಿ ಮನುವಾ ಸರ್ವೆಸ್ವರುಚ್ ಮಾಜೊ ಮಜತ್‍ದಾರ್ ಕೊನಾಕ್ಬಿ ಮಿಯಾ ಭಿಂಯ್ ನಾ; ಮಾನ್ಸಾಚ್ಯಾನ್ ಮಾಕಾ ಕಾಯ್ ಕರುಕ್ ಹೊಯ್ಲ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:6
29 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?


ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II


ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II


ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.


ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II


ಕಾದಿದೆ ಎನ್ನ ಮನ ಪ್ರಭುವಿಗಾಗಿ I ಆತನಿಹನು ಎನಗೆ ಗುರಾಣಿಯಾಗಿ II


ನನಗೆ ನೀನು ನಿರಂತರದ ಸಹಾಯಕ I ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ II


ನನಗಿಲ್ಲದಿದ್ದರೆ ಪ್ರಭುವಿನ ಮರುಕ I ಮನೆಯಾಗುತ್ತಿತ್ತೆನಗೆ ಅಧೋಲೋಕ II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ".


ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.


ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ನಂಬಬೇಡ ಅಧಿಕಾರಿಯನು I ನೆಚ್ಚಬೇಡ ನರಮಾನವನನು I ಉದ್ಧರಿಸಲು ಅಸಮರ್ಥನವನು II


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು.


ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.


ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು.


ಆಗ ಸರ್ವೇಶ್ವರ ಅವನಿಗೆ: “ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು