Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:7 - ಕನ್ನಡ ಸತ್ಯವೇದವು C.L. Bible (BSI)

7 ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತುಮ್ಚ್ಯಾ ಫಿಡಾರ್‍ಯಾಂಚೊ ಮಟ್ಲ್ಯಾರ್, ತುಮ್ಕಾ ಬಾತ್ಮಿ ಹಾನಲ್ಲ್ಯಾಂಚಿ ಯಾದ್ ಕರಾ ಅಪ್ನಾಚೆ ಜಿವನ್ ತೆನಿ ಕಶೆ ಸಾರ್ಲ್ಯಾನಿ ತೆ ಚಿಂತುನ್ ಬಗಾ ಅನಿ ತೆಂಚ್ಯಾ ವಿಶ್ವಾಸಾಚ್ಯಾ ಸಾರ್ಕೆ ತುಮಿಬಿ ವಿಶ್ವಾಸ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:7
27 ತಿಳಿವುಗಳ ಹೋಲಿಕೆ  

ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ.


ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.


ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.


ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?


ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಆದ್ದರಿಂದ ನನ್ನನ್ನು ಅನುಸರಿಸಿ ಬಾಳಬೇಕೆಂದು ನಿಮ್ಮನ್ನು ಒತ್ತಾಯಿಸುತ್ತೇನೆ.


ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.


ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು.


ನಾನು ಕ್ರಿಸ್ತಯೇಸುವನ್ನು ಅನುಸರಿಸುವಂತೆ, ನೀವೂ ನನ್ನನ್ನೂ ಅನುಸರಿಸಿರಿ.


ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.


“ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.


ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ.


ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.


ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.


ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು