Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:9 - ಕನ್ನಡ ಸತ್ಯವೇದವು C.L. Bible (BSI)

9 ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನಾವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ದೇವರ ಕೃಪೆಯನ್ನು ಆತುಕೊಂಡು ಮನಸ್ಸನ್ನು ದೃಢಮಾಡಿಕೊಳ್ಳುವದು ಉತ್ತಮವೇ; ಭೋಜನಪದಾರ್ಥಗಳನ್ನು ವಿಶೇಷಿಸುವದರಿಂದ ಅದು ಆಗುವದಿಲ್ಲ. ಭೋಜನಪದಾರ್ಥಗಳನ್ನು ವಿಶೇಷಿಸಿ ನಡೆದವರು ಏನೂ ಪ್ರಯೋಜನ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಿಮ್ಮನ್ನು ತಪ್ಪು ಮಾರ್ಗಕ್ಕೆ ಎಳೆಯುವಂತಹ ಅನ್ಯೋಪದೇಶಗಳ ಕಡೆಗೆ ಗಮನಕೊಡಬೇಡಿ. ನಿಮ್ಮ ಹೃದಯಗಳು ದೇವರ ಕೃಪೆಯಿಂದ ಬಲವಾಗಬೇಕೇ ಹೊರತು ಆಹಾರದ ನಿಯಮಗಳ ಪಾಲನೆಯಿಂದಲ್ಲ. ಆ ನಿಯಮಗಳ ಪಾಲನೆಯು ಜನರಿಗೆ ಸಹಾಯಕವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ದುಸ್ರ್ಯಾ-ದುಸ್ರ್ಯಾ ಅನಿ ವಿಚಿತ್ರ್ ಶಿಕಾಪಾಕ್ನಿ ಮಳ್ಳ್ ಹೊವ್ನ್ ವ್ಹಾಕ್ಡ್ಯಾ ವಾಟೆಕ್ ಪರ್‍ತುನಕಾಶಿ, ಅಮ್ಚೊ ಭುತ್ತುರ್ಲೊ ಮನ್ ಅಮಿ ಕುರ್ಪೆನ್ ಘಟ್ ಕರಲ್ಲೆ ಬರೆ; ಖಾನಾಚ್ಯಾ ವಿಶಯಾತ್ ಅಸಲ್ಲ್ಯಾ ನೆಮಾ ಸಾರ್ಕೆ ನ್ಹಯ್, ತಿ ಪಾಳ್ಲ್ಯಾರ್ಬಿ ತೆಂಕಾ ತಿ ಕಸ್ಲ್ಯಾಬಿ ಉಪ್ಕಾರಾಕ್ ಪಡುಕ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:9
35 ತಿಳಿವುಗಳ ಹೋಲಿಕೆ  

ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.


ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.


ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.


ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;


ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.


ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.


ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.


ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.


ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.


ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.


ನಾವು ತಿನ್ನುವ ಆಹಾರ ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾರದು. ಅದನ್ನು ತಿನ್ನದಿರುವುದರಿಂದ ನಮಗೆ ನಷ್ಟವಿಲ್ಲ, ತಿಂದರೆ ಲಾಭವಿಲ್ಲ.


ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ.


“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.


“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.


ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.


ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II


ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು