ಇಬ್ರಿಯರಿಗೆ 2:10 - ಕನ್ನಡ ಸತ್ಯವೇದವು C.L. Bible (BSI)10 ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ ಆತನು ಬಹು ಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾಕರ್ತನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಸಗ್ಳ್ಯಾಚೊ ಆರಂಬ್ ಅನಿ ಅಂತ್ ಹೊವ್ನ್ ಅಸಲ್ಲ್ಯಾ ದೆವಾನ್ ಲೈ ಲೊಕಾಕ್ನಿ ಮಹಿಮೆನ್ ಭರುಸಾಟ್ನಿ ತೆಂಕಾ ಸುಟ್ಕಾ ಗಾವಿ ಸಾರ್ಕೆ ಕರ್‍ತಲ್ಯಾ ಜೆಜುಕ್ ತರಾಸಾಂಚ್ಯಾ ವೈನಾ ಅದ್ದಿ ಸಂಪುರ್ನ್ ಕರುಚೆ ಮನ್ತಲೆ ಹೊತ್ತೆ. ಅಧ್ಯಾಯವನ್ನು ನೋಡಿ |