Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)

11 ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾಕೆಂದರೆ ಪವಿತ್ರಗೊಳಿಸುವವನಿಗೂ ಪವಿತ್ರರಾದವರಿಗೂ ಒಬ್ಬಾತನೇ ಮೂಲ ಆತನು ದೇವರೇ. ಈ ಕಾರಣದಿಂದ ಅವರನ್ನು ಪವಿತ್ರಗೊಳಿಸುವಾತನು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಕಂದರೆ ಪವಿತ್ರ ಮಾಡುವಾತನಿಗೂ ಪವಿತ್ರರಾಗುವವರೆಲ್ಲರಿಗೂ ಒಬ್ಬನೇ ತಂದೆ ಇದ್ದಾನೆ. ಈ ಕಾರಣದಿಂದ ಪವಿತ್ರ ಮಾಡುವಾತನು ಪವಿತ್ರರಾಗುವವರನ್ನು ಸಹೋದರರೆನ್ನುವದಕ್ಕೆ ನಾಚಿಕೆಪಡದೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಕಶ್ಯಾಕ್ ಮಟ್ಲ್ಯಾರ್, ಪವಿತ್ರ್ ಕರ್‍ತಲ್ಯಾಚೊ, ಅನಿ ಪವಿತ್ರ್ ಹೊಲ್ಲ್ಯಾಂಚೊ ಸಗ್ಳ್ಯಾಂಚೊ ಬಾಬಾ ಎಕ್ಲೊಚ್, ತೆಚ್ಯಾ ಸಾಟಿಚ್ ಸಗ್ಳ್ಯಾಕ್ನಿ ಅಪ್ನಾಚ್ಯಾ ಕುಟ್ಮಾಚೆ ಮನುಕ್ ಜೆಜು ಲಜಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:11
19 ತಿಳಿವುಗಳ ಹೋಲಿಕೆ  

ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.


ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.


ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.


ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.


ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.


ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.


ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.


ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.


ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.


ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’


ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.


“ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು!


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು