Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:17 - ಕನ್ನಡ ಸತ್ಯವೇದವು C.L. Bible (BSI)

17 ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ಆತನು ಎಲ್ಲಾ ವಿಷಯಗಳಲ್ಲಿಯೂ ತನ್ನ ಸಹೋದರರಿಗೆ ಸಮಾನನಾಗುವುದು ಅತ್ಯಗತ್ಯವಾಗಿತ್ತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ, ದೇವರ ಕಾರ್ಯಗಳಲ್ಲಿ ಕರುಣೆಯೂ, ನಂಬಿಕೆಯೂ, ಉಳ್ಳ ಮಹಾಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಕಾರಣದಿಂದಲೇ ಆತನು ಎಲ್ಲಾ ವಿಧದಲ್ಲಿಯೂ ತನ್ನ ಸಹೋದರ ಸಹೋದರಿಯರಿಗೆ ಸಮಾನನಾಗಬೇಕಾಯಿತು. ದೇವರ ಸೇವೆಯಲ್ಲಿ ಆತನು ಜನರಿಗೆ ಕರುಣೆಯುಳ್ಳವನೂ ನಂಬಿಗಸ್ತನೂ ಆದ ಪ್ರಧಾನ ಯಾಜಕನಾದನು. ಹೀಗೆ ಆತನು ಜನರ ಪಾಪಗಳಿಗೆ ಕ್ಷಮೆಯನ್ನು ತರಲು ಸಾಧ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಶೆ ರಾತಾನಾ ಸಗ್ಳ್ಯಾತ್ಬಿ ತೆನಿ ಅಪ್ನಿಚ್ ಅಪ್ನಾಚ್ಯಾ ಭಾವಾಂಚ್ಯಾ ಸಾರ್ಕೆ ಹೊತಲೆ ಪಡ್ಲೆ. ಹೆಚ್ಯಾ ವೈನಾ ಲೊಕಾನಿ ಪಾಪಾಂಚಿ ಮಾಪಿ ಖಮ್ವುನ್ ಘೆವ್‍ಸಾಟ್ನಿ ದೆವಾಚ್ಯಾ ಸೆವೆತ್ ದಯಾ ದಾಕ್ವುತಲೊ ಅನಿ ವಿಶ್ವಾಸಿ ಶ್ರೆಸ್ಟ್ ಯಾಜಕ್ ತೊ ಹೊವ್ಕ್ ಪಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:17
37 ತಿಳಿವುಗಳ ಹೋಲಿಕೆ  

ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.


ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.


ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.


ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.


ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು.


ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.


ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.


ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ;


ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು.


ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.


ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.


ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು.


ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.


ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು.


ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.


ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.


ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.


ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.


ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.


ಪ್ರತಿಯೊಬ್ಬ ಪ್ರಧಾನಯಾಜಕನು ಕಾಣಿಕೆಗಳನ್ನೂ ಬಲಿಗಳನ್ನೂ ಅರ್ಪಿಸುವುದಕ್ಕಾಗಿಯೇ ನೇಮಕಗೊಂಡಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ನಮ್ಮ ಈ ಪ್ರಧಾನಯಾಜಕರಿಗೂ ಏನಾದರೂ ಇರಲೇಬೇಕು.


ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠಯಾಜಕ ನಮಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು