Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:18 - ಕನ್ನಡ ಸತ್ಯವೇದವು C.L. Bible (BSI)

18 ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವುದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡಲು ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತಾನೇ ಶೋಧಿಸಲ್ಪಟ್ಟು ಸಂಕಟಕ್ಕೆ ಒಳಗಾದುದರಿಂದ, ಶೋಧಿಸಲ್ಪಡುವ ಜನರಿಗೆ ಸಹಾಯ ಮಾಡಲು ಈಗ ಆತನು ಸಮರ್ಥನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ಸೊಸಲ್ಲ್ಯಾ ಕಸ್ಟಾ ವೈನಾಚ್ ದೆವಾನ್ ಅದ್ದಿಚ್ ತೆಚಿ ಪರಿಕ್ಷಾ ಕರುನ್ ಬಗಟ್ಲ್ಯಾನ್ ತಸೆಮನುನ್ ಚುಕೆತ್ ಸಿರ್ಕುನ್ ಪಡಲ್ಲ್ಯಾಕ್ನಿ ಆಧಾರ್ ದಿವ್ಕ್ ತೆಚ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:18
16 ತಿಳಿವುಗಳ ಹೋಲಿಕೆ  

ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.


ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು.


ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


“ನನ್ನ ಶೋಧನೆ-ವೇದನೆಗಳಲ್ಲಿ ನನ್ನನ್ನು ಬಿಟ್ಟಗಲದೆ ಇದ್ದವರು ನೀವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು