Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:2 - ಕನ್ನಡ ಸತ್ಯವೇದವು C.L. Bible (BSI)

2 ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಕೆಂದರೆ, ದೇವದೂತರ ಮೂಲಕ ಹೇಳಲ್ಪಟ್ಟ ಸಂದೇಶವು ಸ್ಥಿರವಾಗಿರಲು, ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಮತ್ತು ಅವಿಧೇಯತ್ವಕ್ಕೂ ಶಿಕ್ಷಾರ್ಹವಾದ ಪ್ರತಿಫಲ ಹೊಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಕಂದರೆ ದೇವದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯವಾದ ಪ್ರತಿಫಲವುಂಟಾದ ಮೇಲೆ [ನಮ್ಮ ಮುಂದಿಟ್ಟಿರುವ]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರು ತನ್ನ ದೂತರ ಮೂಲಕ ಕೊಟ್ಟ ವಾಕ್ಯವು ನಿಜವಾದದ್ದೆಂದು ತೋರಿಸಲ್ಪಟ್ಟಿದೆ. ಯೆಹೂದ್ಯರು ಈ ವಾಕ್ಯಕ್ಕೆ ವಿರುದ್ಧವಾಗಿ ತಪ್ಪು ಮಾಡಿದಾಗಲೆಲ್ಲಾ ಮತ್ತು ಅವಿಧೇಯರಾದಾಗಲೆಲ್ಲಾ ತಕ್ಕ ದಂಡನೆ ಹೊಂದುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ದೆವಾ ದುತಾಂಚ್ಯಾ ಮುಖಾಂತರ್ ಅಮ್ಚ್ಯಾ ಅದ್ಲ್ಯಾ ಲೊಕಾಕ್ನಿ ಪರ್ಗಟ್ ಕರುನ್ ಸಾಂಗುನ್ ಹೊಲ್ಲ್ಯಾ ಗೊಸ್ಟಿಯಾ ತೆಂಚ್ಯಾ ಮದ್ದಿ ಘಟ್ ರ್‍ಹಾಲ್ಯಾ, ತ್ಯಾ ಗೊಸ್ಟಿಯಾಕ್ನಿ ವ್ಹಾಕ್ಡೆ ಜಾವ್ನ್ ಕರಲ್ಲ್ಯಾ ಸಗ್ಳ್ಯಾ ಚುಕಿಂಚ್ಯಾಸಾಟ್ನಿ ನಾಹೊಲ್ಯಾರ್ ಖಾಲ್ತಿ ಹೊವ್ನ್ ಚಲಿನಸ್ತಾನಾ ಕರಲ್ಲ್ಯಾ ಕಾಮಾಂಚ್ಯಾಸಾಟ್ನಿ ಎಕ್ ಎಳಾರ್ ತೆಂಕಾ ಶಿಕ್ಷಾ ಗಾವಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:2
29 ತಿಳಿವುಗಳ ಹೋಲಿಕೆ  

ದೇವದೂತರ ಮೂಲಕ ಧರ್ಮಶಾಸ್ತ್ರವನ್ನು ಪಡೆದ ನೀವೇ ಅದಕ್ಕೆ ಅವಿಧೇಯರಾಗಿ ನಡೆದಿರಿ,” ಎಂದನು.


ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.


ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ.


ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.


ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.


ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.


ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.


ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.


ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II


“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಊರುಗಳೊಂದರಲ್ಲಿ ಒಬ್ಬ ಪುರುಷ ಅಥವಾ ಸ್ತ್ರೀ ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನೆಯನ್ನು ಮೀರಿದ್ದಾರೆ ಎಂದೂ,


ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.


ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು.


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು