Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:6 - ಕನ್ನಡ ಸತ್ಯವೇದವು C.L. Bible (BSI)

6 ಅದಕ್ಕೆ ಬದಲಾಗಿ, ಪವಿತ್ರಗ್ರಂಥದಲ್ಲಿ ಒಂದೆಡೆ ಹೀಗೆಂದು ಸ್ಪಷ್ಟವಾಗಿ ಹೇಳಲಾಗಿದೆ: “ಓ ದೇವಾ, ಹುಲುಮಾನವನೆಷ್ಟರವನು ನೀನವನ ಗಮನಿಸಲು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಯಾಕೆ ನೆನಪಿಸಿಕೊಳ್ಳಬೇಕು? ಮಾನವನು ಎಷ್ಟರವನು, ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಶಾಸ್ತ್ರದ ಒಂದು ಭಾಗದಲ್ಲಿ - ಮನುಷ್ಯನು ಎಷ್ಟು ಮಾತ್ರದವನು; ಅವನನ್ನು ನೀನು ಯಾಕೆ ನೆನಸಬೇಕು? ಮಾನವನು ಎಷ್ಟರವನು; ಅವನಲ್ಲಿ ಯಾಕೆ ಲಕ್ಷ್ಯವಿಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ: “ದೇವರೇ, ನೀನು ಮಾನವರನ್ನು ಏಕೆ ನೆನಪುಮಾಡಿಕೊಳ್ಳಬೇಕು? ನೀನು ಮನುಷ್ಯನಿಗೋಸ್ಕರ ಏಕೆ ಚಿಂತಿಸಬೇಕು? ಅವನು ಅಷ್ಟೊಂದು ಮುಖ್ಯನಾದವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಪವಿತ್ರ್ ಪುಸ್ತಕಾತ್ ಎಕಾಕ್ಡೆ ಅಶೆ ಸಾಂಗುನ್ ಹೊಲ್ಲೆ ಹಾಯ್, “ತಿಯಾ ಮಾನ್ಸಾಚಿ ಯಾದ್ ಕಾಡುಕ್ ತೊ ಕೊನ್? ತೆಜಿ ಕಾಳ್ಜಿ ಕರುಕ್ ಮಾನುಸ್ ಕೊನ್?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:6
16 ತಿಳಿವುಗಳ ಹೋಲಿಕೆ  

ಹೇ ಪ್ರಭೂ, ಮನುಜನು ಎಷ್ಟರವನು, ನೀನವನನು ಲಕ್ಷಿಸಲು I ನರಮಾನವನು ಏತರವನು, ನೀನವನನು ಪರಾಮರಿಸಲು II


“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?


ಇಂತಿರಲು ಹುಳುವಿನಂಥ ನರನು ಏತರವನು? ಕ್ರಿಮಿಯಂಥ ನರನು ಎಷ್ಟುಮಾತ್ರದವನು?”


ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತು: “ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂದು ಬರೆದದೆ.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಅವರೇ ಮತ್ತೊಂದು ಕಡೆಯಲ್ಲಿ : “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.


ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು