Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:8 - ಕನ್ನಡ ಸತ್ಯವೇದವು C.L. Bible (BSI)

8 ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ” ಎಂದು ಪವಿತ್ರಶಾಸ್ತ್ರದಲ್ಲಿ ಒಬ್ಬನು ಒಂದೆಡೆ ಸಾಕ್ಷಿ ಹೇಳಿದನು. ಆತನು ಎಲ್ಲವನ್ನೂ ಮಾನವಕುಲಕ್ಕೆ ಅಧೀನ ಮಾಡಿದ್ದಾನೆಂಬುದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು. ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವುದಾಗಿ ನಾವು ಇನ್ನು ಕಂಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸ್ಪಷ್ಟವಾಗಿ ಹೇಳಿದನು. ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲವೆಂದು ಹೇಳಿದ ಹಾಗಾಯಿತು; ಆದರೆ ಎಲ್ಲವೂ ಅವನಿಗೆ ಅಧೀನವಾಗಿರುವದನ್ನು ನಾವು ಇನ್ನೂ ಕಾಣುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ.” ದೇವರು ಎಲ್ಲವನ್ನೂ ಆತನಿಗೆ ಅಧೀನಗೊಳಿಸಿದ್ದರೆ, ಆತನು ಆಳದೆ ಇರುವಂಥದ್ದು ಒಂದಾದರೂ ಇಲ್ಲ. ಆದರೆ ಸಮಸ್ತದ ಮೇಲೆ ಅವನು ಆಳ್ವಿಕೆ ಮಾಡುತ್ತಿರುವುದು ನಮಗಿನ್ನೂ ಕಾಣುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಸಗ್ಳ್ಯಾ ರಿತಿಚಿ ಸಾಮಾನಾ ತೆಚ್ಯಾ ಅಧಿಕಾರಾಚ್ಯಾ ಖಾಲ್ತಿ ಯೆಯ್ ಸಾರ್ಕೆ ಕರ್‍ಲೆಯ್ ಮಟ್ಲ್ಯಾರ್, ತೆಚ್ಯಾ ಅಧಿಕಾರಾಕ್ನಾ ಕಾಯ್ಬಿ ಭಾಯ್ರ್ ಹಾನುಕ್ ನಾ ಮನುನ್ ಹೊಲೆ, ಹೊಲ್ಯಾರ್ಬಿ ಸಗ್ಳ್ಯೆಬಿ ತೆಂಚ್ಯಾ ಅದಿಕಾರಾಚ್ಯಾ ಖಾಲ್ತಿ ಹೊತ್ತೆ ಅತ್ತಾ ಅಮ್ಕಾ ದಿಸುನ್ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:8
19 ತಿಳಿವುಗಳ ಹೋಲಿಕೆ  

ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.


“ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.


ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?


ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ನಾವು ಪ್ರಸ್ತಾಪಿಸುತ್ತಿರುವ ನೂತನ ಸಾಮ್ರಾಜ್ಯವನ್ನು ದೇವರು ತಮ್ಮ ದೂತರಿಗೆ ಅಧೀನಪಡಿಸಲಿಲ್ಲ.


ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು