Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:9 - ಕನ್ನಡ ಸತ್ಯವೇದವು C.L. Bible (BSI)

9 ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟವನಾದ ಯೇಸು ಬಾಧೆಯನ್ನುಭವಿಸಿ ಮೃತಪಟ್ಟದ್ದರಿಂದಲೇ ಮಹಿಮೆಯನ್ನೂ ಗೌರವವನ್ನೂ ಕಿರೀಟವಾಗಿ ಹೊಂದಿರುವುದನ್ನು ನಾವು ನೋಡುತ್ತೇವೆ. ಅದಕ್ಕಾಗಿಯೇ ದೇವರ ಕೃಪೆಯಿಂದ ಯೇಸು ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆದರೂ ದೇವದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು, ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ. ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು. ಆತನು ದೇವರ ಕೃಪೆಯಿಂದ ಎಲ್ಲರಿಗೋಸ್ಕರ ಮರಣವನ್ನು ಅನುಭವಿಸಲೇಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಜೆಜುಕ್ ಉಲ್ಲ್ಯಾಸ್ಯಾ ಎಳಾಸಾಟಿ ದೆವ್‍ದುತಾಂಚ್ಯಾನ್‍ಬಿ ಖಾಯ್ಲ್ಯಾ ಜಾಗ್ಯಾರ್ ಹಾನಲ್ಲೆ ಅಮಿ ಬಗಟ್ಲಾಂವ್; ಕಶ್ಯಾಕ್ ಮಟ್ಲ್ಯಾರ್, ದೆವಾಚ್ಯಾ ಉದಾರ್ ಇಚ್ಚ್ಯಾ ಪರ್‍ಕಾರ್ ಜೆಜುನ್ ಹರ್ ಎಕ್ ಮಾನ್ಸಾಂಚ್ಯಾಸಾಟ್ನಿ ಮರಾನ್ ಸೊಸ್ತಲೆ ಹೊತ್ತೆ. ತೆನಿ ಮರಾನ್ ಸೊಸ್ಲ್ಯಾನ್ ತಸೆ ಮನುನ್ ತೆನಿ ಮಹಿಮೆಚೆ ಅನಿ ಮಾನಾಚೆ ಮುಕುಟ್ ಖಮ್ವುನ್ ಘೆಟಲ್ಲೆ ಅಮಿ ಬಗುಲಾವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:9
39 ತಿಳಿವುಗಳ ಹೋಲಿಕೆ  

ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.


ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.


ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.


ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.


ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.


ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಪ್ರತಿಯೊಬ್ಬ ಪ್ರಧಾನಯಾಜಕನು ಕಾಣಿಕೆಗಳನ್ನೂ ಬಲಿಗಳನ್ನೂ ಅರ್ಪಿಸುವುದಕ್ಕಾಗಿಯೇ ನೇಮಕಗೊಂಡಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ನಮ್ಮ ಈ ಪ್ರಧಾನಯಾಜಕರಿಗೂ ಏನಾದರೂ ಇರಲೇಬೇಕು.


ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.


ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.


ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.


ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


“ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ.


“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;


ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.


ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;


“ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಪುನಃ ಯೇಸುಸ್ವಾಮಿ, ಅವರಿಗೆ “ಇಲ್ಲಿರುವವರಲ್ಲಿ ಕೆಲವರು ದೇವರ ಸಾಮ್ರಾಜ್ಯವು ಪ್ರಭಾವದೊಡನೆ ಜಗತ್ತಿನಲ್ಲಿ ಪ್ರತ್ಯಕ್ಷವಾಗುವುದನ್ನು ನೋಡದೆ ಮರಣಹೊಂದುವುದಿಲ್ಲ ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದು ಹೇಳಿದರು.


ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು