Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:18 - ಕನ್ನಡ ಸತ್ಯವೇದವು C.L. Bible (BSI)

18 “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ವಿಶ್ರಾಂತಿಯಲ್ಲಿ ನೀವು ಸೇರುವುದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನೂ? ಅವಿಧೇಯರನ್ನು ಕುರಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ. ನನ್ನ ವಿಶ್ರಾಂತಿಯಲ್ಲಿ ನೀವು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಪ್ರಮಾಣಮಾಡಿದನು? ಅವಿಧೇಯರನ್ನು ಕುರಿತಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ತನ್ನ ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲವೆಂದು ದೇವರು ಪ್ರಮಾಣ ಮಾಡಿದಾಗ, ಆತನು ಯಾರೊಡನೆ ಮಾತಾಡುತ್ತಿದ್ದನು? ತನಗೆ ಅವಿಧೇಯರಾದ ಜನರ ಬಗ್ಗೆ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಮಿಯಾ ತೆಂಕಾ ಆರಾಮ್ ಘೆವ್ಕ್ ಮನುನ್ ತಯಾರ್ ಕರುನ್ ಥವಲ್ಲ್ಯಾ ತ್ಯಾ ಗಾಂವಾತ್ ತೆನಿ ಕನ್ನಾಬಿ ಭುತ್ತುರ್ ಗುಸಿನಾತ್.” ಮನುನ್ ದೆವಾನ್ ಆನ್ ಘಾಲುನ್ ಸಾಂಗಟಲ್ಲೆ ಕೊನಾಚ್ಯಾ ವಿಶಯಾತ್ ತೆ? ತೆನಿ ಸಾಂಗಟಲ್ಲೆ ಆಯ್ಕಿನಸ್ತಾನಾ ಚಲ್ತಲ್ಯಾ ಲೊಕಾಂಚ್ಯಾ ವಿಶಯಾತುಚ್ ನ್ಹಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:18
16 ತಿಳಿವುಗಳ ಹೋಲಿಕೆ  

ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.


ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.


ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.


ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.


ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.”


ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ.


ಅಂಥ ವ್ಯಕ್ತಿಗಳು ಸರ್ವೇಶ್ವರನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ.


ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು