Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:19 - ಕನ್ನಡ ಸತ್ಯವೇದವು C.L. Bible (BSI)

19 ಆ ವಿಶ್ರಾಂತಿಯ ನೆಲೆಯನ್ನು ಅವರು ಸೇರದೆಹೋದದ್ದು ತಮ್ಮ ಅವಿಶ್ವಾಸದಿಂದಲೇ ಎಂಬುದು ನಮಗೆ ಸ್ಪಷ್ಟವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ವಿಶ್ರಾಂತಿಯಲ್ಲಿ ಸೇರಲಾರದೇ ಹೋದದ್ದು ಅವರ ಅಪನಂಬಿಕೆಯಿಂದಲೇ ಎಂದು ನಾವು ಅರಿತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ಆ ಜನರಿಗೆ ಅವಕಾಶ ದೊರೆಯಲಿಲ್ಲ. ಅವರಲ್ಲಿ ನಂಬಿಕೆ ಇಲ್ಲದಿದ್ದ ಕಾರಣವೇ ಅವರು ಪ್ರವೇಶಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಶೆ ರಾತಾನಾ, ತೆಂಚ್ಯಾ ವಿಶ್ವಾಸ್‍ ನಸಲ್ಲ್ಯಾಚ್ ತೆಂಕಾ ಆರಾಮ್ ಘೆತಲ್ಯಾ ಗಾಂವಾತ್ ಭುತ್ತುರ್ ಗುಸುಕ್ ಅಡ್ವುಲ್ಯಾನ್ ಮನುನ್ ಅಮ್ಕಾ ಬರಬ್ಬರ್ ಕಳುನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:19
10 ತಿಳಿವುಗಳ ಹೋಲಿಕೆ  

ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.


ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.


“ಆದರೂ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ನಂಬಲೇ ಇಲ್ಲ.


ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II


ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.


ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು