Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:3 - ಕನ್ನಡ ಸತ್ಯವೇದವು C.L. Bible (BSI)

3 ಆದರೆ, ಮನೆಕಟ್ಟುವವನು ಮನೆಗಿಂತ ಹೆಚ್ಚಿನ ಮಾನ್ಯತೆ ಉಳ್ಳವನಾಗಿರುವಂತೆ ಯೇಸು, ಮೋಶೆಗಿಂತಲೂ ಹೆಚ್ಚಿನ ಗೌರವಕ್ಕೆ ಪಾತ್ರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ ಮೋಶೆಗಿಂತ ಯೇಸು ಹೆಚ್ಚಾದ ಗೌರವಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಮಾನವಿರುವದರಿಂದ ಮೋಶೆಗಿಂತ ಯೇಸುವು ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸಲ್ಪಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಒಬ್ಬ ಮನುಷ್ಯನು ಮನೆಯನ್ನು ಕಟ್ಟಿದಾಗ, ಜನರು ಮನೆಗಿಂತಲೂ ಅವನಿಗೇ ಹೆಚ್ಚು ಮಾನ್ಯತೆಯನ್ನು ಕೊಡುವಂತೆಯೇ ಯೇಸು ಮೋಶೆಗಿಂತ ಹೆಚ್ಚು ಮಾನ್ಯತೆಯನ್ನು ಹೊಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ, ಮೋಶೆಗಿಂತ ಯೇಸು ಹೆಚ್ಚಾದ ಮಹಿಮೆಗೆ ಯೋಗ್ಯರೆಂದು ಎಣಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ ಘರಾನ್ಯಾಚ್ಯಾನಿಬಿ ಜಾಸ್ತಿ ಘರ್ ಭಾಂದ್ತಲ್ಯಾಕ್ ಮಾನ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:3
11 ತಿಳಿವುಗಳ ಹೋಲಿಕೆ  

ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.


ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”


ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.


ಪ್ರತಿಯೊಂದು ಮನೆಗೂ ಕಟ್ಟಿದವನೊಬ್ಬನು ಇರುತ್ತಾನೆ; ಸಮಸ್ತವನ್ನು ಕಟ್ಟಿದವರಾದರೋ ದೇವರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು