ಇಬ್ರಿಯರಿಗೆ 3:5 - ಕನ್ನಡ ಸತ್ಯವೇದವು C.L. Bible (BSI)5 ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾದ ಸೇವಕನಾಗಿದ್ದನು. ಅವನು ಮುಂದೆ ಪ್ರಕಟವಾಗಬೇಕಾಗಿದ್ದಂಥ ವಿಷಯಗಳಿಗೆ ಸಾಕ್ಷಿಕೊಟ್ಟಿದ್ದಾನೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ದೇವರ ಮನೆಯಲ್ಲೆಲ್ಲಾ ಮೋಶೆಯು ಸೇವಕನಂತೆ ನಂಬಿಗಸ್ತನಾಗಿದ್ದನು. ಮುಂದೆ ಪ್ರಕಟವಾಗಲಿದ್ದ ಸಂಗತಿಗಳಿಗೆ ಅವನು ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಮೊಯ್ಜೆ ದೆವಾಚ್ಯಾ ಘರಾತ್ ಎಕ್ ವಿಶ್ವಾಸಾಚ್ಯಾ ಆಳಾಚ್ಯಾ ಸಾರ್ಕೆ ಕಾಮ್ ಕರುಕ್ ಲಾಗಲ್ಲೊ; ದೆವ್ ಫಿಡೆ ಸಾಂಗುಚೆ ಮನುನ್ ಹೊತ್ತ್ಯಾ ಖಬ್ರೆಕ್ ಸಾಕ್ಷಿ ದಿವ್ಕ್ ಲಾಗಲ್ಲೊ. ಅಧ್ಯಾಯವನ್ನು ನೋಡಿ |
ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.