ಇಬ್ರಿಯರಿಗೆ 4:1 - ಕನ್ನಡ ಸತ್ಯವೇದವು C.L. Bible (BSI)1 ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನವು ಇನ್ನೂ ಇರುವಲ್ಲಿ ನಿಮ್ಮೊಳಗೆ ಯಾವನಾದರೂ ಆ ವಾಗ್ದಾನದ ಫಲವನ್ನು ಹೊಂದದೆ ತಪ್ಪುವವನಾದಾನೋ ಎಂದು ನಾವು ಭಯಪಡೋಣ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ತೆಚೆಸಾಟ್ನಿ ದೆವಾಚ್ಯಾ ತ್ಯಾ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸ್ತಾಂವ್ ಮನುನ್ ದೆವಾನ್ ದಿಲ್ಲಿಚಿ ಗೊಸ್ಟ್ ಅಜುನ್‍ಬಿ ಝಿತ್ತಿ ಹಾಯ್ ತಸೆ ಮನುನ್ ಆರಾಮಾಚ್ಯಾ ಜಿವನಾತ್ ಭುತ್ತುರ್ ಗುಸುಕ್ ತುಮ್ಚ್ಯಾತ್ಲ್ಯಾ ಕೊನಾಕ್ಬಿ ನಕ್ಕೊ ಮನ್ತಲೊ ನಿರ್‍ನಯ್ ಗಾವಿಲ್ ಮನ್ತಲ್ಯಾ ಭಿಂಯಾನ್ ಅಮಿ ಹುಶಾರ್ಕಿಕ್ ರಾಂವಾ. ಅಧ್ಯಾಯವನ್ನು ನೋಡಿ |